ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡಿಸಿದ್ದಾರೆ. 3,27,747 ಕೋಟಿ ಗಾತ್ರದ ಬಜೆಟ್ ಅನ್ನು 2 ಗಂಟೆ 50 ನಿಮಿಷ ಓದಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೂ ಅನುದಾನ ಮಿಸಲಿಡಲಾಗಿದೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮಕ್ಕೆ ಸೂಚಿಸಲಾಗಿದೆ.
ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ “3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ” ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಿ ಬಜೆಟ್ನಲ್ಲಿ ಸೂಚಿಸಲಾಗಿದೆ.
ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ. “ಸಿ” ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲಿದೆ. ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ರೂ. ಅನುದಾನ ಹಾಗೂ ರಾಜ್ಯದಲ್ಲಿರುವ ವಲ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ. ಅನುದಾನ ಹಾಗೂ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳಿಗೆ ಮಾಸಿಕ ಗೌರವಧನ ಸೌಲಭ್ಯ ನೀಡಲು ಬಜೆಟ್ನಲ್ಲಿ ತಿಳಿಸಲಾಗಿದೆ.