ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಿಲ್ಲೆಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಸುಳ್ಯ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ನಿಟ್ಟಿನಲ್ಲಿ ಪುತ್ತೂರು, ಸುಳ್ಯ, ಕಡಬದಲ್ಲಿ ಬುಧವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪುತ್ತೂರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗಿರೀಶ್ ನಂದನ್ ಬುಧವಾರ ಆದೇಶ ಹೊರಡಿಸಿದ್ದು, ಜುಲೈ 27 ರಂದು ಬೆಳಿಗ್ಗೆ 6 ರಿಂದ ಜುಲೈ 28 ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.
ಬಂಟ್ವಾಳದ ಬಿಸಿ ರೋಡ್‌ನಲ್ಲಿ ಹಿಂದೂ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಮನವಿ ಮಾಡಿದ್ದಾರೆ. ಇನ್ಸ್ಪೆಕ್ಟರ್ ವಿವೇಕಾನಂದ , ಪಿಎಸ್‌ಐ ಅವಿನಾಶ್ ನೇತೃತ್ವದಲ್ಲಿ ಬಿಗಿಬಂದೋಬಸ್ತ್ ಮಾಡಲಾಗಿದೆ.