ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಆಕ್ರೋಷ ಭುಗಿಲೆದ್ದಿದೆ. ಇದೀಗ ಬಿಜೆಪಿ ಯುವ ಮೋರ್ಚಾದಲ್ಲಿ ಕಾರ್ಯಕರ್ತರ ರಾಜಿನಾಮೆ ಪರ್ವ ಶುರುವಾಗಿದೆ. ಕೇವಲ ಕಠಿಣ ಕ್ರಮ ಕಠಿಣ ಕ್ರಮ ಅಂತ ಬಿಜೆಪಿ ಹೇಳಿಕೆಗಷ್ಟೇ ಸೀಮಿತವಾಗಿದೆ. ಆದರೆ ಕಾರ್ಯಕರ್ತರು ಸಾಯುತ್ತಲೇ ಇದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಿರುವುದು ತೀವ್ರ ಖಂಡನೀಯ ಎಂದು ಸ್ವಪಕ್ಷದವರ ಮೇಲೆಯೇ ಅಸಮಾಧಾನದ ಹೊಗೆಯಾಡುತ್ತಿದೆ.
ಹೀಗಾಗಿ ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳ ಕಾರ್ಯಕರ್ತರು ಯುವ ಮೋರ್ಚಾಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದಾರೆ. ಇನ್ನಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇನ್ನೂ ಹಲವರು ಯುವಮೋರ್ಚಾ ಪದಾಧಿಕಾರಿಗಳ ಹುದ್ದೆಗೆ ರಾಜಿನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.