ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ದೆಹಲಿ ಸರ್ಕಾರಕ್ಕೆ ತನ್ನ ಮನವಿಯನ್ನು ತಿದ್ದುಪಡಿ ಮಾಡಲು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸುವಂತೆ ನಿರ್ದೇಶಿಸಿದೆ.

ಅಧಿಕಾರಿಗಳನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯ ಕುರಿತು  Supreme Court ಸೋಮವಾರ ಕೇಂದ್ರಕ್ಕೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ದೆಹಲಿ ಸರ್ಕಾರಕ್ಕೆ ತನ್ನ ಮನವಿಯನ್ನು ತಿದ್ದುಪಡಿ ಮಾಡಲು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸುವಂತೆ ನಿರ್ದೇಶಿಸಿದೆ.