ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿದ ಸಿದ್ಧರಾಮಯ್ಯ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಪ್ರವೀಣ್ ನೆಟ್ಟಾರ್ ಹತ್ಯೆಗೆ ಟ್ಟೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಭಜರಂಗದಳದ ನಾಯಕ ಪ್ರವೀಣ ನೆಟ್ಟಾರ್ ಹತ್ಯೆ ತೀವ್ರ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಗೆ ತೆರೆ ಎಳೆದು ಶಾಂತಿ ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ತಪ್ಪಿತಸ್ಥರ ಜಾತಿ, ಧರ್ಮ, ಪಕ್ಷ ಲೆಕ್ಕಿಸದೇ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಟ್ಟೀಟ್‌ನಲ್ಲಿ ಹೇಳಿದ್ದಾರೆ.