ಧಾರವಾಡ: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ ಹಂತಕರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗೆ ಪ್ರತಿಕ್ರಿಯಿಸಿದ ಮುತಾಲಿಕ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕಾದರೆ
ಮುಲ್ಲಾ, ಮೌಲ್ವಿ, ಎಸ್‌ಡಿಪಿಐ, ಪಿಎಫ್‌ಐ ನಿಯಂತ್ರಿಸಬೇಕು. ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿ ಬೀಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಾರದ ಹಿಂದೆಯೇ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎನ್ನುವ ಮಾಹಿತಿ ಇದ್ದರೂ ಸಹ ಪೊಲೀಸರು ಜಾಗೃತರಾಗದಿರುವುದು ವಿಪರ್ಯಾಸ. ಇಂತಹ ಕ್ರೌರ್ಯವನ್ನು ನಿಯಂತ್ರಿಸಬೇಕಾದರೆ, ಒಂದೋ ಹಂತಕರನ್ನು ಎನ್‌ಕೌಂಟರ್ ಮಾಡಬೇಕು. ಇಲ್ಲವಾದಲ್ಲಿ ನ್ಯಾಯಾಂಗದ ಮೂಲಕ ತ್ವರಿತವಾಗಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ನಡೆದ ಹರ್ಷ ಹತ್ಯೆಯಲ್ಲಿ ಸರ್ಕಾರ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು. ಆದರೆ ಹರ್ಷನ ಹಂತಕರು ಜೈಲಿನಲ್ಲಿದ್ದುಕೊಂಡು ತಮಗೆ ಬೇಕಾದಂತಹ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಸರ್ಕಾರ ಇಂತಹ ಹಂತಕರನ್ನು ಹದ್ದುಬಸ್ತಿನಲ್ಲಿ ಇಡದಿದ್ದಲ್ಲಿ ಇನ್ನಷ್ಟು ಹಿಂದೂಗಳು ಬಲಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.