ಬೆಂಗಳೂರು: ಚೀನಾ ಆ್ಯಪ್ ಮೂಲಕ ಲೋನ್ ಪಡೆದಿದ್ದ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಹೆಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ. ತೇಜಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ಟಾರ್ಚರ್ ನೀಡುತ್ತಿದ್ದರಂತೆ. ಹಾಗಾಗಿ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.