ವಿದ್ಯುಕ್ತವಾಗಿ ಚಾಲನೆಗೊಂಡ ಭಟ್ಕಳ ಮಾರಿ ಜಾತ್ರೆ

ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯು ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿತು.

ಮಂಗಳವಾರದಂದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಲಾಯಿತು. ಸಾವಿರಾರು ಭಕ್ತರು ಶ್ರೀದೇವಿಯ ದರ್ಶನ ಪಡೆದುಕೊಂಡರು.

ಜಿಲ್ಲೆಯಲ್ಲಿಯೇ ಅತ್ಯಂತ ವಿಜೃಂಬಣೆಯಿಂದ ಅದ್ದೂರಿಯಾಗಿ ನಡೆಯುವ ಮಾರಿ ಜಾತ್ರೆಗಳಲ್ಲಿ ಭಟ್ಕಳ ತಾಲೂಕಿನ ಮಾರಿ ಜಾತ್ರೆಯು ಸಹ ಒಂದು. ಸುಮಾರು 25 ವರ್ಷಗಳಿಂದ ಮಾರಿಜಾತ್ರೆಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಹಿಂದುಳಿದವರ ಹಾಗೂ ಪರಿಶಿಷ್ಠ ಜಾತಿ ಪಂಗಡದವರ ಮುಂದಾಳತ್ವದಲ್ಲಿ ನಡೆಯುತಿರುವ ವಿಶಿಷ್ಠ ಜಾತ್ರೆಯಾಗಿದೆ.

ಬುಧವಾರದಂದು ಮುಂಜಾನೆ ಕರೆತರಲಾದ ಮಾರಿದೇವಿಯ ಮೂರ್ತಿಯನ್ನು ಮಾರಿಕಾಂಬಾ ದೇವಿಯ ಎದುರಿನ ಪ್ರಾಂಗಣದ ಗರ್ಭಗುಡಿಯ ಹೊರಗಡೆ ಮಾರಿದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.