ರೈಲಿನಲ್ಲಿ ಮಹಿಳೆಯರ ಶಕ್ತಿ ಪ್ರದರ್ಶನ; ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಮಹಿಳೆಯರು

ಕೋಲ್ಕತ್ತಾ: ಲೋಕಲ್ ರೈಲಿನಲ್ಲಿ ಮಹಿಳೆಯರ ಗುಂಪೊಂದು ಮಾತಿಗೆ ಮಾತು ಬೆಳೆದು ಪರಸ್ಪರ ಚಪ್ಪಲಿಯಲ್ಲಿ ಬಡಿದಾಟ ಶುರು ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಮಹಿಳೆಯರ ಈ ವರ್ತನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಇದೀಗಾ ಸೋಶಿಯಲ್​​ ಮೀಡಿಯಾದಲ್ಲಿ ವೈರಲ ಆಗಿದೆ. ವಿಡಿಯೋದಲ್ಲಿ ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದಾಡುತ್ತಿರುವುದು ಹಾಗೂ ಚಪ್ಪಲಿಯಲ್ಲಿ ಪರಸ್ಪರ ಹೊಡೆದಾಡುತ್ತಿರುವುದು ಕಂಡುಬಂದಿದೆ.

ಈಗಾಗಲೇ 5ಸಾವಿರಕ್ಕಿಂತೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಜಗಳಕ್ಕೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಈ ಮಹಿಳೆಯರು ಜಗಳವಾಡುವುದನ್ನು ನೋಡುವುದು ಸಂಪೂರ್ಣವಾಗಿ ಭಯಾನಕವಾಗಿದೆ. ಅಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ನೆಟ್ಟಿಗರಿಂದ ಭಾರೀ ಟೀಕೆಗೆ ಕಾರಣವಾಗಿದೆ. ‘ನಾರಿ ಶಕ್ತಿ’ ಎಂದು ಸಾಕಷ್ಟು ನೆಟ್ಟಿಗರು ಹಾಸ್ಯಸ್ಪದವಾಗಿ ಬರೆದುಕೊಂಡಿದ್ದಾರೆ. “ರೈಲಿನೊಳಗೆ ಉಚಿತ WWE,” ಮತ್ತೊಬ್ಬ ನೆಟ್ಟಿಗರು ಬರೆದುಕೊಂಡಿದ್ದಾರೆ.