ದಾಂಡೇಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಪಿತೂರಿ ರೂಪಿಸುತ್ತಿದ್ದು, ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಸೋಮಾನಿ ವೃತ್ತದಲ್ಲಿ ಬುಧವಾರ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯ್ತು.
ರಾಷ್ಟ್ರಪಿತ ಮಹಾತ್ಮ ಗಾಂದಿಜೀಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮಭೌನ ಪ್ರತಿಭಟನೆಗೆ ಚಾಲನೆಯನ್ನು ನೀಡಲಾಯ್ತು.
ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿ.ಆರ್.ಹೆಗಡೆಯವರ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಪಕ್ಷದ ನಗರ ಸಭಾ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.