ಸ್ಥಳಕ್ಕೆ ನಳೀನ್, ಸುನೀಲ್ ಕುಮಾರ್ ಅಂಗಾರ ಭೇಟಿ

ಪುತ್ತೂರು: ಪ್ರವೀಣ್ ನೆಟ್ಟಾರೆ ಮೃತದೇಹವನ್ನು ಈಗಾಗಲೇ ಮೆರವಣಿಗೆ ಮೂಲಕ ಹುಟ್ಟೂರಿಗೆ ತರಲಾಗಿದೆ. ಸಾವಿರಾರು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ್ರು. ಹುಟ್ಟೂರಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳದಲ್ಲಿ ಈಗಾಗಲೇ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗಿದೆ.

ಕುಟುಂಬಸ್ಥರ ಆಕ್ರಂದನ

ಇನ್ನು ಪ್ರವೀಣ್ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲಿ ಮುಟ್ಟಿದೆ. ಪ್ರವೀಣ್ ತಾಯಿ ಕಣ್ಣೀರು ಹಾಕಿದ್ದಾರೆ. ಇಂತಹ ಒಳ್ಳೆ ವ್ಯಕ್ತಿಗೆ ದುಷ್ಕರ್ಮಿಗಳು ಯಾಕೆ ಹೀಗೆ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.

ಸ್ಥಳಕ್ಕೆ ನಳೀನ್, ಸುನೀಲ್ ಕುಮಾರ್ ಅಂಗಾರ ಭೇಟಿ

ಇನ್ನು ಕಾರ್ಯಕರ್ತರ ಆಕ್ರೋಶದ ಬಳಿಕ ಎಚ್ಚೆತ್ತ ಜಿಲ್ಲೆಯ ಬಿಜೆಪಿ ಮುಖಂಡರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ಬಿಜೆಪಿ ಮುಂಖಂಡರ ಆಗಮನವಾಗುತ್ತಿದ್ದಂತೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್ ಹಾಗೂ ಶಾಸಕ ಅಂಗಾರ ಸ್ಥಳಕ್ಕೆ ತೆರಳಿದ್ದು ಕುಟುಂಬಸ್ಥರಿಗೆ ಸಂತ್ವನ ಹೇಳಿದ್ದಾರೆ.