ಹಳಿಯಾಳದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ದಾಂಡೇಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಹುನ್ನಾರ ನಡೆಸುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಡಿ ಹಳಿಯಾಳ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದಲ್ಲಿ ಇಂದು ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರಪಿತ ಮಹಾತ್ಮ ಗಾಂದಿಜೀಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮೌನ ಪ್ರತಿಭಟನೆಗೆ ಚಾಲನೆಯನ್ನು ನೀಡಲಾಯ್ತು.

ಈ ಸಂದರ್ಭದಲ್ಲಿ ಹಳಿಯಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಪಾಟೀಲ್, ಕೆಪಿಸಿಸಿ ಸದಸ್ಯರಾದ ಸುಭಾಷ್ ಕೊರ್ವೇಕರ್, ಹಳಿಯಾಳ ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಅಜರ್ ಬಸರಿಕಟ್ಟಿ, ಹಳಿಯಾಳ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಂಕರ್ ಬೆಳಗಾಂವಕರ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಾಲಾ ಬ್ರಗಾಂಜಾ, ಯುವ ಕಾಂಗ್ರೆಸ್ ಅಧ್ಯಕ್ಷ ರವಿ ತೋರಣಗಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಬಿ.ಡಿ.ಚೌಗುಳೆ, ಸಂತೋಷ್ ರೇಣುಕೆ, ಅನಿಲ್ ಚೌವ್ಹಾಣ್, ಕೈತನಾ ಬಾರ್ಬೋಜಾ, ಎಚ್.ಬಿ.ಪರಶುರಾಮ, ದೇಮಣಿ ಶಿರೋಜಿ, ರೋಹನ್ ಬ್ರಗಾಂಜಾ, ಸಂಜು ಮಿಶಾಲೆ, ಎಂ.ಎಸ್.ತೋರಸ್ಕರ್, ಸಂಬಾಜಿ ವಾಲೇಕರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.