ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿಯನ್ನ ಕೊಲೆ ಮಾಡಿ , 5ವರ್ಷದ ಮಗುವನ್ನ ಅಪಹರಿಸಿದ ಘಟನೆ ನಡೆದಿದೆ. ಕೊಳೂರು ಗ್ರಾಮದ ನಿವಾಸಿ ಭಾರತಿ(27) ಕೊಲೆಯಾದ ಗೃಹಿಣಿ. ಪತಿ ಮನೆಗೆ ಬಂದಾಗ ಪತ್ನಿ ಭಾರತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ. ಅತ್ತ ಮಗುವನ್ನ ಹುಡುಕಿದರೂ ಎಲ್ಲಿಯೂ ಸಿಕ್ಕಿಲ್ಲ. ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೊಟಕ್ಕೆ ಕಳೆದ ರಾತ್ರಿ ಮನೆಗೆ ನುಗ್ಗಿ ಪ್ರಿಯಕರ ಹರೀಶ್ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.