ಬೆಳ್ಳಾರೆಯಲ್ಲಿ ಲಾಠಿ ಚಾರ್ಜ್.!

ಪುತ್ತೂರು: ಪ್ರವೀಣ್ ಮೃತದೇಹ ಹುಟ್ಟೂರಿಗೆ ಆಗಮಿಸುತ್ತಾ ಇದ್ದಂತೆ ಸ್ಥಳದಲ್ಲಿ ಜನಸಾಗರವೇ ಸೇರಿದೆ. ಸೇರಿದ ಜನರನ್ನ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಹೀಗಾಗಿ ಪೊಲೀಸರು ಲಾಠಿಚಾರ್ಜ್ ಗೆ ಮುಂದಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸವನ್ನೇ ಪಡುತ್ತಿದ್ದಾರೆ. ಪ್ರವೀಣ್ ಅಂತಿಮ ದರ್ಶನದ ಮೇಲೆ ಕಾರ್ಯಕರ್ತರು ಸಿಟ್ಟು ಪ್ರದರ್ಶಿಸಿದ್ದಾರೆ.

ಸ್ಥಳದಲ್ಲಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಗುಂಪು ಚದುರಿಸಲು ಲಾಠಿಚಾರ್ಜ್ ಮಾಡಿದ್ದು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸರ ಲಾಠಿ ಏಟಿನಿಂದ ಕಾರ್ಯಕರ್ತನೊಬ್ಬನಿಗೆ ಗಾಯವಾಗಿ ರಕ್ತಸ್ರಾವವಾಗುತ್ತಿದೆ. ಆತನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಸಾಗಿಸಿದ್ದಾರೆ.

ಪೊಲೀಸರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಹೆಚ್ಚುವರಿಯಾಗಿ ವಿವಿಧ ಕಡೆಗಳಿಂದ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಳ್ಳಲಾಗಿದೆ.