ಶಿರಸಿ: ರಾಷ್ಟ್ರದ ಪ್ರತಿಯೊಬ್ಬರ ಮನೆಯಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ಸರ್ಕಾರದಿಂದ ಹಮ್ಮಿಕೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮ ಯಶಸ್ವಿಯಾಗಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದೂ ರಾಷ್ಟದಲ್ಲಿ ನಾವೆಲ್ಲರೂ ಒಂದೇ ಆಗಿರುವಾಗ ಎಲ್ಲರ ಮನೆಯಲ್ಲಿಯೂ ತಿರಂಗಾ ಹಾರಿಸ್ಲೇಬೇಕು. ತಿರಂಗಾ ಸರಬರಾಜು ಯಾವ ರೀತಿಯಲ್ಲಿ ಮಾಡಬೇಕೆನ್ನುವ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದರು. ಚುನಾವಣೆ ಹತ್ತಿರವಿರುವುದರಿಂದ ಮೊದಲು ನಾವು ಕಾರ್ಯಕರ್ತರಲ್ಲಿರುವ ಗೊಂದಲವನ್ನು ನಿವಾರಿಸಬೇಕಿದೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಬೂತ್ ಮಟ್ಟ, ಶಕ್ತಿ, ಮಹಾಶಕ್ತಿ ಹಾಗು ಮಂಡಲ ಮಟ್ಟದಲ್ಲಿ ಸಜ್ಜುಗೊಳ್ಳಬೇಕಿದೆ. ಮುಖ್ಯವಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಬಹು ಮುಖ್ಯ ಕೆಲಸ ಕಾರ್ಯಕರ್ತರಿಂದ ಆಗಬೇಕಿದೆ ಎಂದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾದ್ಯಕ್ಷ ವೆಂಕಟೇಶ ನಾಯಕ್, ಶಾಸಕ ಸುನೀಲ್ ನಾಯ್ಕ, ಪ್ರಮುಖರಾದ ಪ್ರಮೋದ ಹೆಗಡೆ ಮುಂತಾದವರು ಇದ್ದರು.