ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಹಲವಾರು ಅಪಘಾತಗಳು ಸಂಭವಿಸುತ್ತಿದ್ದು, ಈ ಕುರಿತು ವ್ಯಾಪಕ ಚರ್ಚೆಯಾಗುತ್ತಿರುವ ಮಧ್ಯೆಯೇ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಅನೇಕ ಪ್ರಕರಣಗಳೂ ವರದಿಯಾಗುತ್ತಿವೆ. ಎಕ್ಸ್ಪ್ರೆಸ್ ವೇ ಹೆದ್ದಾರಿಯ ತಪ್ಪು ಲೇನ್ನಲ್ಲಿ ಬಂದ ಆಟೊ ರಿಕ್ಷಾವೊಂದಕ್ಕೆ ಡಿಕ್ಕಿಹೊಡೆಯುವುದರಿಂದ ವೇಗವಾಗಿ ಸಾಗುತ್ತಿದ್ದ ಕಾರು ಸ್ವಲ್ಪದರಲ್ಲೇ ಬಚಾವಾದ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಘಟನೆಯ ವೀಡಿಯೊ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಅದನ್ನು ಥರ್ಡ್‌ಐ ಎಂಬ ಟ್ವಿಟರ್ ಖಾತೆಯಲ್ಲಿ ಗುರುವಾರ ಹಂಚಿಕೊಳ್ಳಲಾಗಿದೆ
‘ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ರಾಂಗ್ ಸೈಡ್ ಚಾಲನೆಯ ಮತ್ತೊಂದು ಘಟನೆ’ ಎಂದು ಥರ್ಡ್ಐ ಟ್ವೀಟ್ ಮಾಡಿದೆ. ಈ ಬಾರಿ ಆಟೋ ಅಪಘಾತಕ್ಕೆ ಕಾರಣವಾಗುತ್ತಿತ್ತು. ಈ ವೀಡಿಯೊವನ್ನು ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದೆ ಮತ್ತು ಒಬ್ಬರು ನನಗೆ ಕಳುಹಿಸಿದ್ದಾರೆ. ದುರದೃಷ್ಟವಶಾತ್, ನಂಬರ್ ಪ್ಲೇಟ್ ಅನ್ನು ಓದಲು ಸಾಧ್ಯವಾಗುತ್ತಿಲ್ಲ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ. ರಾಮನಗರ ಎಸ್ಪಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಟ್ಯಾಗ್ ಮಾಡಲಾಗಿದೆ.