ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಕೈಜೋಡಿಸಿ : ಆರ್.ಎಸ್.ಪವಾರ್

ದಾಂಡೇಲಿ : ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ನಿರ್ದೇಶನದಂತೆ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ   ಪ್ಲಾಸ್ಟಿಕ್ ಮುಕ್ತ ಅಭಿಯಾನವನ್ನು ಹಮಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ  ಜುಲೈ :02 ರಂದು ಚಾಲನೆಯನ್ನು ನೀಡಲಾಗಿದ್ದು, ಜುಲೈ : 28 ರವರೆಗೆ ಈ ಅಭಿಯಾನ ನಡೆಯಲಿದೆ. ಈ ಅಭಿಯಾನದ ಯಶಸ್ಸಿಗೆ ನಗರದ ನಾಗರಿಕರು ಕೈಜೋಡಿಸಿ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸಬೇಕೆಂದು ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಕರೆ ನೀಡಿದ್ದಾರೆ.

ಅವರು ಈ ಬಗ್ಗೆ ಗುರುವಾರ ನಗರ ಸಭೆಯಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ನಗರದಲ್ಲಿ ತರಕಾರಿ/ ಹೂವು, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು, ಅಂಗಡಿ ಮಾಲಿಕರು, ಸೂಪರ್ ಮಾರ್ಕೆಟ್ ಅಂಗಡಿಗಳು ಮತ್ತು ಬಸ್ ನಿಲ್ಡಾಣಗಳಲ್ಲಿ  ಪ್ಲಾಸ್ಟಿಕ್  ಬಳಕೆಯನ್ನು ಸಂಪೂರ್ಣವಾಗಿ ನಿಷೇದಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ನಗರಸಭೆಯಿಂದ ದಾಳಿ ಮಾಡಲಾಗುತ್ತಿದೆ. ಒಂದಾನುವೇಳೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ  ಪ್ಲಾಸ್ಟಿಕ್ ವಶಪಡಿಸಿ ಅಂಥವರ ಮೇಲೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಂತೆ ಸೂಕ್ತ ಕ್ರಮ ಜರುಗಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡದೇ ಸಹಕರಿಸಿ ಈ ಅಭಿಯಾನವನ್ನು ಯಶಸ್ವಿಗೂಳಿಸಬೇಕೆಂದು ಆರ್.ಎಸ್.ಪವಾರ್ ಅವರು ಕರೆ ನೀಡಿದ್ದಾರೆ.