ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮ ಯಾತ್ರೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದಾರೆ. ಜೊತೆಗೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ,
ಪುತ್ತೂರಿನಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಕ್ರಮಗಳ ಕುರಿತು ಸಿಎಂ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.
ಇನ್ನು ಈಗಾಗಲೇ ಪ್ರವೀಣ್ ಹುಟ್ಟೂರಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾರಿಚಾರ್ಚ್ ಮಾಡಿದ್ದಾರೆ. ಆದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಪರಿಸ್ಥಿತಿ ಮತ್ತಷ್ಟು ಬಿಗಿಯಾಗುವ ಲಕ್ಷಣಗಳು ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಎಮರ್ಜೆನ್ಸಿ ಮೀಟಿಂಗ್ ನಡೆಸಲಾಗಿದೆ.