ಹಳಿಯಾಳ ತಾಲ್ಲೂಕಿನ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಹಳಿಯಾಳ : ಜಿಲ್ಲಾ ಪಂಚಾಯತ ಉತ್ತರಕನ್ನಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಹಳಿಯಾಳ ತಾಲೂಕಿನ ತೇರಗಾಂವ, ಕಾವಲವಾಡ ಮತ್ತು 111 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ನಿರ್ಮಾಣ ಹಂತದಲ್ಲಿರುವ ಜಲ ಶುದ್ಧಿಕರಣ ಘಟಕ(16.5 MLD)ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಇಂದು ಭೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ನೀರಿನ ಗುಣಮಟ್ಟ ತಿಳಿಯಲು ಡಿಜಿಟಲ್ ಡಿಸ್‌ಪ್ಲೇ ಅಳವಡಿಸಲು ಸಲಹೆ ನೀಡಿದರು.

ಆನಂತರ ನರೇಗಾ ಯೋಜನೆಯಡಿ ನಿರ್ಮಾಣವಾದ ಶಿಶುಪಾಲನಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಹಾಗೂ ವಿವಿಧ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದರು. ಹಳಿಯಾಳ ತಾಲೂಕ‌ ಆಸ್ಪತ್ರೆಗೆ ಭೇಟಿ ನೀಡಿದ ಅವರು ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತನ ಕಾರ್ಯ ನಿರ್ವಾಹಣಾಧಿಕಾರಿ ಪರಶುರಾಮ ಎಂ ಗಸ್ತೆ, ತಾಲೂಕ ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ನರೇಗಾ ಸಹಾಯಕ ನಿರ್ದೇಶಕರಾದ ಎನ್.ಎಮ್ ಕುಮಾರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮರೆಪ್ಪ ಮೇತ್ರಿ , ನರೇಗಾ ತಾಂತ್ರಿಕ ಸಂಯೋಜಕರಾದ ಮಹೇಶ್ ಪಟಗಾರ, ಐಇಸಿ ಸಂಯೋಜಕರು, ಬಿಎಫ್ ಟಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.