ಶ್ರೀಹರಿಕೋಟಾ ಜುಲೈ 14: ಇಸ್ರೋದಿಂದ ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ ಎಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕೇಂದ್ರದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್ (ISRO chief Somanath) ಹೇಳಿದ್ದಾರೆ. LVM 3-M4 ರಾಕೆಟ್ ಚಂದ್ರಯಾನ 3 ಅನ್ನು ನಿಖರ ಕಕ್ಷೆಗೆ ಸೇರಿಸಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರನ ಅಂಗಳಕ್ಕೆ ಇಳಿಯುವ ಚಂದ್ರಯಾನ-3 ಅನ್ನು ಇಂದು (ಶುಕ್ರವಾರ) ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್‌ನಲ್ಲಿ ಉಡಾವಣೆ ಮಾಡಿದೆ.
26 ಗಂಟೆಗಳ ಕೌಂಟ್‌ಡೌನ್ ಮಧ್ಯಾಹ್ನ 1:05 ಕ್ಕೆ ಪ್ರಾರಂಭವಾಯಿತು. ಚಂದ್ರಯಾನ-3 ಸ್ವದೇಶಿ ಲ್ಯಾಂಡರ್ ಮಾಡ್ಯೂಲ್, ಪ್ರೊಪಲ್ಷನ್ ಮಾಡ್ಯೂಲ್ ಮತ್ತು ರೋವರ್ ಅನ್ನು ಒಳಗೊಂಡಿದೆ.