ನಾಳೆ ವಿದ್ಯುತ್ ಗ್ರಾಹಕರೊಂದಿಗೆ ಸಂವಾದ ಸಭೆ

ದಾಂಡೇಲಿ: ನಗರದ ಹೆಸ್ಕಾಂ ಉಪ ವಿಭಾಗೀಯ ಕಛೇರಿ ಆವರಣದಲ್ಲಿ ನಾಳೆ ಜುಲೈ 15 ರಂದು ಮಧ್ಯಾಹ್ನ 3.00 ರಿಂದ 5.30 ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್‌ ಬಗ್ಗೆ ಇರುವಂತಹ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರತಿ ತಿಂಗಳು 3ನೇ ಶನಿವಾರ ಗ್ರಾಹಕರ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ದೀಪಕ್ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.