ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಟ್ಕಳದ ಮಖ್ದೂಮ್ ಕಾಲೋನಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ವಸ್ತುಗಳು, ಮೂರು ಕಪಾಟುಗಳು, ಹಾಸಿಗೆ, ವಿವಿಧ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಯಾವುದೇ ಕುಟುಂಬ ಸದಸ್ಯರು ಮನೆಯಲ್ಲಿ ಇರದ ಕಾರಣ, ಎಲ್ಲರೂ ಸುರಕ್ಷಿತರಾಗಿದ್ದಾರೆ.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರ ಮುಹಮ್ಮದ್ ಸಾದಿಕ್ ಮಟ್ಟಾ ಅವರ ಸಹೋದರಿ ಮುಬಸ್ಶಿರಾ ಯೂಸುಫ್ ಅವರ ಮನೆಯೇ ಬೆಂಕಿಗಾಹುತಿಯಾಗಿದ್ದು ಹಿಂದಿನ ದಿನವಷ್ಟೆ ಮನೆಯ ಕುಟುಂಬದ ಸದಸ್ಯರು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ.
ಮೆನಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಸಹಾಯಕ್ಕೆ ಬಂದರು. ಮೊದಲು ಮನೆಯಿಂದ ಗ್ಯಾಸ್ ಸಿಲಿಂಡರ್ ತೆಗೆದು ಪಂಪ್ ಸೆಟ್ ಮೋಟಾರ್ ಬಳಸಿ ಬೆಂಕಿಯನ್ನು ನಿಯಂತ್ರಿಸಿ ಮತ್ತಷ್ಟು ಹರಡುವುದನ್ನು ತಪ್ಪಿಸಿದ್ದಾರೆ. ಮಾಹಿತಿ ಪಡೆದ ಹೆಸ್ಕಾಂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ರು..