ನವದೆಹಲಿ: ದೇಶದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ಈ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಪರಿಹರಿಸಲು ಮುಂದಾಗಿದೆ. ದೇಶದ ಎಲ್ಲಾ ಹಳ್ಳಿಗಳಲ್ಲಿಯೂ 4ಜಿ ಮೊಬೈಲ್ ಸೇವೆಗಳ ಲಭ್ಯಕ್ಕೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 26,316 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಯೂನಿವರ್ಸಲ್ ಸರ್ವೀಸ್ ಆಬ್ಲಿಗೇಷನ್ ಫಂಡ್ ಮೂಲಕ ದೇಶದ ಎಲ್ಲ ಹಳ್ಳಿಗಳಲ್ಲಿ 4ಜಿ ಮೊಬೈಲ್ ಸೇವೆಗಳನ್ನು ಪೂರೈಸುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ದೇಶದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.