ವಿದ್ಯುತ್ ಪ್ರವಹಿಸಿ ಒಟ್ಟು 32 ಕುರಿಗಳು ಬಲಿ

ದಾವಣಗೆರೆ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪಟ್ಟಣದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಹರಿದು ಬಿದ್ದು 17 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹನುಮಜ್ಜರ ಪರಸಪ್ಪ ಎನ್ನುವವರಿಗೆ ಸೇರಿದ 13 ಕುರಿ, 2 ಟಗರು, 2 ಮೇಕೆಗಳು ಇದಾಗಿದೆ. ಇನ್ನು ಕುರಿಗಳು ಮೇಯಲು ಹೋದಾಗ ತುಂಡಾಗಿ ಬಿದ್ದು 11 ಕೆವಿ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದೆ. ಪಕ್ಕದಲ್ಲೇ ಇದ್ದ ಪರಸಪ್ಪ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಪಶು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿ ಸಾಕಾಣಿಕೆಯಿಂದಲೇ ಕುರಿಗಾಹಿ ಪರಸಪ್ಪ ಅವರ ಜೀವನ ನಡೆಯುತ್ತಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಘಟನೆ ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.