ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ತರಗತಿ ಆರಂಭ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಈ ವರ್ಷದಿಂದ ಪ್ರಥಮ ಪಿಯುಸಿ ವಿಜ್ಞಾನ ತರಗತಿ ಆರಂಭವಾಗಿದೆ ಎಂದು ಪ್ರಾಚಾರ್ಯ ವಿಶ್ವನಾಥ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಊಟ, ವಸತಿ ಸಹಿತ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡಲಾಗುವ ಇಲ್ಲಿ ನುರಿತ ಉಪನ್ಯಾಸಕರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಠ್ಯಪುಸ್ತಕ ನೋಟ್ ಪುಸ್ತಕ, ವಿವಿಧ ಪಠ್ಯ ಸಾಮಗ್ರಿಗಳು ಹಾಗೂ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ.

ಪಿಯುಸಿ ವಿಜ್ಞಾನ ಶಿಕ್ಷಣವನ್ನು ಪಡೆಯಲು ಆಸಕ್ತರಿರುವ ಎಸ್.ಎಸ್.ಎಲ್.ಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ಮತ್ತು 6ನೇ ತರಗತಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೂಡಲೇ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿ ಪ್ರವೇಶವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 8904391794, 9481274474 ಇಲ್ಲವೇ 8310998779 ಸಂಪರ್ಕಿಸುವಂತೆ ಪ್ರಾಚಾರ್ಯ ವಿಶ್ವನಾಥ್ ಅವರು ಹೇಳಿದರು.