ಹಳಿಯಾಳ ತಾಲ್ಲೂಕು ಆಸ್ಪತ್ರೆಯಲ್ಲಿ ಕೀಟಜನ್ಯ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

ಹಳಿಯಾಳ : ಜಿಲ್ಲಾಡಳಿತ ಉ.ಕ, ಜಿಲ್ಲಾ ಪಂಚಾಯ್ತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಳಿಯಾಳ, ರಾಜ್ಯ ವಿಜ್ಞಾನ ಪರಿಷತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಡಿ ಹಳಿಯಾಳದ ತಾಲ್ಲೂಕು ಆಸ್ಪತ್ರೆಯ ಸಭಾಭವನದಲ್ಲಿ ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಿನ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಿಗೆ ಕೀಟಜನ್ಯ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರವನ್ನುವನ್ನು ಇಂದು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆಯವರು ಉದ್ಘಾಟಿಸಿ ಮಾತನಾಡುತ್ತಾ, ಮುಖ್ಯವಾಗಿ ವಿಜ್ಞಾನ ವಿಷಯದ ಶಿಕ್ಷಕರಿಗೆ ಕೀಟಜನ್ಯ ರೋಗಗಳ ಮಾಹಿತಿ ಅತೀ ಅಗತ್ಯ. ಪ್ರತಿಶಾಲೆಗೂ ವಿಜ್ಞಾನ ಶಿಕ್ಷಕರು ಆರೋಗ್ಯ ರಕ್ಷಕರಿದ್ದಂತೆ. ಈ ನಿಟ್ಟಿನಲ್ಲಿ ಈ ಕಾರ್ಯಾಗಾರ ಉಪಯುಕ್ತವಾಗಿದೆ. ಈ ಕಾರ್ಯಾಗಾರದಲ್ಲಿ ತಿಳಿಸುವ ಮಾಹಿತಿಗಳನ್ನು ತಮ್ಮ ತಮ್ಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಮೂಲಕ ಕೀಟಜನ್ಯ ರೋಗಗಳ ಬಗ್ಗೆ ಜಾಗೃತಿಯನ್ನು ಮೂಡಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಅವರು ಪ್ರತಿ ವಿದ್ಯಾರ್ಥಿಗಳಲ್ಲಿ ಕೀಟಜನ್ಯ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕಾದರೇ ಇದರ ಸಮಗ್ರವಾದ ಮಾಹಿತಿ ಶಿಕ್ಷಕರಿಗೆ ಅತ್ಯವಶ್ಯ. ಈ ನಿಟ್ಟಿನಲ್ಲಿ ಈ ಕಾರ್ಯಾಗಾರ ಮಹತ್ವಪೂರ್ಣವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಣಾಧಿಕಾರಿ ಡಾ.ರಮೇಶ್ ರಾವ್ ಕಾರ್ಯಾಗಾರದ ಉದ್ದೇಶವನ್ನು ವಿವರಿಸಿದರು.

ಆನಂತರ ಡಾ.ಅನಿಲ್ ಕುಮಾರ್ ನಾಯ್ಕ ಮತ್ತು ಡಾ.ರಮೇಶ್ ರಾವ್ ಅವರು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರಕ್ಕೆ ಕಾರಣವಾಗುತ್ತಿರುವ ಸೊಳ್ಳೆಗಳ ಬಗ್ಗೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದ ಯಶಸ್ಸಿಗೆ ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು.