ಜೋಯಿಡಾ : ತಾಲ್ಲೂಕು ಕೇಂದ್ರದ ಕೃಷಿ ಇಲಾಖೆಯಲ್ಲಿ ರೈತರಿಗೆ ವಿತರಣೆ ಮಾಡುತ್ತಿರುವ ಭತ್ತದ ಬೀಜ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಿಂದ ರೈತರಿಗೆ ತೀವ್ರ ನಷ್ಟವಾಗಲಿದೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಮತ್ತೇ ಅದೇ ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು ವಿತರಣೆ ಮಾಡುತ್ತಿದ್ದಾರೆ ಎಂದು ಜೋಯಿಡಾದ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು ಹಾಗೂ ಸಾಮಾಜಿಕ ಮುಖಂಡರು ಆಗಿರುವ ರಫೀಕ್ ಖಾಜಿಯವರು ಆರೋಪಿಸಿದ್ದಾರೆ.
ಅವರು ಮಾಧ್ಯಮದ ಜೊತೆ ಮಾತನಾಡುತ್ತಾ, ಕೃಷಿ ಇಲಾಖೆ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಭತ್ತದ ಬೀಜಗಳನ್ನು ವಿತರಿಸಬೇಕೆ ವಿನ: ರೈತರ ಶ್ರಮಕ್ಕೆ ಮೋಸವಾಗುವಂತಹ ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು ವಿತರಿಸುವುದು ಸರಿಯಾದ ಕ್ರಮವಲ್ಲ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.