ಹಳೆದಾಂಡೇಲಿ ಸ.ಪ.ಪೂರ್ವ ಕಾಲೇಜಿನ ಪ್ರಾಚಾರ್ಯೆ ನಾಗರೇಖಾ ಗಾಂವಕರ ಅವರ ಕೃತಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ನಿಧಿ ಪ್ರಶಸ್ತಿ

ದಾಂಡೇಲಿ : ಕರ್ನಾಟಕ ಲೇಖಕಿಯರ ಸಂಘದಿಂದ ಕೊಡ ಮಾಡುವ 2023ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗೆ ದಾಂಡೇಲಿ ನಗರದ ಹಳೆದಾಂಡೇಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ನಾಗರೇಖಾ ಗಾಂವಕರ್ ಅವರ ದಿ ಡೈರಿ ಆಫ್ ಎ ಯಂಗ್ ಗರ್ಲ್ ಕೃತಿ ಆಯ್ಕೆಯಾಗಿದೆ. ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಕೃತಿ ಇದಾಗಿದ್ದು, ನಾಗಾರೇಖಾ ಗಾಂವಕರ ಅವರು ಈಗಾಗಲೆ ಸಾಕಷ್ಟು ಕೃತಿಗಳನ್ನು ರಚಿಸಿ ಕನ್ನಡ ಸಾರಸ್ವತ ಲೋಕಕ್ಕೆ ನೀಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ನಾಗರೇಖಾ ಗಾಂವಕರ್ ಅವರನ್ನು ನಗರದ ಗಣ್ಯರನೇಕರು ಅಭಿನಂದಿಸಿದ್ದಾರೆ.