ಜೋಯಿಡಾ : ತಾಲ್ಲೂಕು ಕೇಂದ್ರದ ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜವನ್ನು ವಿತರಿಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ ಅವರ ನಿರ್ದೇಶನದಂತೆ ಜೋಯಿಡಾ ತಾಲ್ಲೂಕಿನ ತಹಶೀಲ್ದಾರ್ ಬಸವರಾಜ ತೆನ್ನಳ್ಳಿಯವರು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿದ್ದ ಭತ್ತದ ಬೀಜವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ತಹಶೀಲ್ದಾರ್ ಬಸವರಾಜ ತೆನ್ನಳ್ಳಿಯವರು ಚರ್ಚೆ ನಡೆಸಿದರು.