ದಾಂಡೇಲಿ : ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಲಕ್ಷ್ಮೀ ಪರಬ ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಫೈನಾನ್ಸಿಯಲ್ ಲೆವರೇಜ್ ಚೆಂಜಸ್ ಅಸೋಸಿಯೆಟೆಡ್ ವಿಥ್ ಕಾರ್ಪರೇಟ್ ಮರ್ಜರ್ಸ್ ಇನ್ ಇಂಡಿಯಾ (Financial Leverage Changes Associated with Corporate Mergers in India) ಎಂಬ ವಿಷಯದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ. ಆರ್.ಎಲ್. ಹೈದ್ರಾಬಾದ್ ಅವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧವನ್ನು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಾದರಪಡಿಸಿದ್ದರು.
ಇವರ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಬಿ.ಎಲ್. ಗುಂಡೂರ, ಕಾಲೇಜಿನ ಆಡಳಿತ ಮಂಡಳಿಯವರು, ಬೋಧಕ ಹಾಗೂ ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.