ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ಶಿವಮೊಗ್ಗ, ಜು.21: ಜಿಲ್ಲೆಯ ಭದ್ರಾವತಿ ಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಮುಜಾಯಿದ್ದೀನ್(32)ೆ ಎಂಬಾತನನ್ನ ಬರ್ಬರ ಹತ್ಯೆ ಮಾಡಲಾಗಿದೆ. ನಿನ್ನೆ(ಜು.20) ರಾತ್ರಿ ಸುಮಾರು 12.30 ರ ಸುಮಾರಿಗೆ ಮೃತ ರೌಡಿಶೀಟರ್​ ಮನೆಯಿಂದ ಹೊರಬಂದಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಹೋಗಿದ್ದಾರೆ. ಇನ್ನು ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. ಘಟನೆ ಕುರಿತು ಸ್ಥಳಕ್ಕೆ ಪೇಪರ್​ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.