ವಿಜಯಪುರ, ಜು.21: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಶುರವಾಗಿದೆ. ಅದರಂತೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ಮಳೆಗೆ ನೆನೆದು ಸಾರ್ವಜನಿಕ ಶೌಚಾಲಯದ ಮೇಲ್ಛಾವಣಿ ಕುಸಿದು ಬಿದ್ದು ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಮಲಾಬಾಯಿ ಬಗಲಿ, ಮುಸ್ಕಾನ್, ಮುರ್ತುಜಭಿಗೆ ಎಂಬ ಮೂವರು ಮಹಿಳೆಯರು ಶೌಚಾಲಯದಲ್ಲಿ ಸಿಲುಕಿದ್ದಾರೆ. ಕೂಡಲೇ ಗ್ರಾಮಸ್ಥರು ಹೋಗಿ ಮೂವರು ಮಹಿಳೆಯರನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ, ಸಧ್ಯ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.