ದಾಂಡೇಲಿ : ದಾಂಡೇಲಿ-ಜೋಯಿಡಾ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರ ಧರೆಗುರುಳಿದ್ದ ಪರಿಣಾಮವಾಗಿ ಸಂಚಾರ ಅಸ್ತವ್ಯಸ್ತಗೊಂಡು ಸಾಕಷ್ಟು ತೊಂದರೆಯಾಗಿತ್ತು. ಮರ ಧರೆಗುರುಳಿದ ತಕ್ಷಣವೆ ವಿರ್ನೋಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪ್ರಧಾನಿ ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯರ ಸಹಕಾರದಲ್ಲಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರವನ್ನು ತೆರವುಗೊಳಿಸಿದ್ದಾರೆ. ಇದೀಗ ದಾಂಡೇಲಿ-ಜೋಯಿಡಾ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.