ಬೆಳಗಾವಿ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಮೂರು ಮನೆಗಳು ಕುಸಿತವಾಗಿದ್ದು, ಮನೆಯಲ್ಲಿದ್ದ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓರ್ವ ಅಜ್ಜಿಗೆ ತೀವ್ರ ಗಾಯವಾದ ಹಿನ್ನೆಲೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈರಯ್ಯ ಪತ್ರಯ್ಯನವರ್, ಶಂಕ್ರಪ್ಪ, ಬಸವಣ್ಣಪ್ಪಗೆ ಸೇರಿದ ಮನೆಯ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದ ಹಿನ್ನೆಲೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬೈಲಹೊಂಗಲ ಎಸಿ, ಇಓ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.



