ಭಾರತ-ಪಾಕ್ ನಡುವೆ ಫೈನಲ್ ಫೈಟ್: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

India A vs Pakistan A: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಪಾಕ್ ತಂಡವನ್ನು ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಮಣಿಸಿತ್ತು.

ಆದರೆ ಸೆಮಿಫೈನಲ್​ನಲ್ಲಿ ಭರ್ಜರಿ ಕಂಬ್ಯಾಕ್ ಮಾಡುವ ಮೂಲಕ ಪಾಕಿಸ್ತಾನ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ. ಮೊದಲ ಸೆಮಿಫೈನಲ್​ನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪಾಕ್ ತಂಡವು 60 ರನ್​ಗಳಿಂದ ಜಯ ಸಾಧಿಸಿದರೆ ಫೈನಲ್​ಗೆ ಪ್ರವೇಶಿಸಿದೆ.

ಇತ್ತ ಟೀಮ್ ಇಂಡಿಯಾ ಕಿರಿಯರು ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶ್ ತಂಡವನ್ನು 51 ರನ್​ಗಳಿಂದ ಬಗ್ಗು ಬಡಿದು ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಕಿರಿಯರ ಏಷ್ಯಾಕಪ್​ ಫೈನಲ್ ಪಂದ್ಯ ಯಾವಾಗ?

ಈ ಪಂದ್ಯವು ಭಾನುವಾರ, ಅಂದರೆ ಜುಲೈ 23 ರಂದು ಶ್ರೀಲಂಕಾದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.

ಭಾರತ-ಪಾಕಿಸ್ತಾನ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಶುರು?

ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ಆರಂಭವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು?

ಭಾರತ ಎ ವಿರುದ್ಧ ಪಾಕಿಸ್ತಾನ ಎ ನಡುವಣ ಫೈನಲ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್​ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಲೈವ್ ಸ್ಟೀಮಿಂಗ್ ವೀಕ್ಷಿಸುವುದು ಹೇಗೆ?

ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಎ ತಂಡ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್‌ಸಿನ್ಹ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.

ಪಾಕಿಸ್ತಾನ್ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ), ಒಮೈರ್ ಬಿನ್ ಯೂಸುಫ್, ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್ , ಸುಫಿಯಾನ್ ಮುಖೀಮ್ ಮತ್ತು ತಯ್ಯಬ್ ತಾಹಿರ್.