ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಎಂಟು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರ ಸಂಬಂಧಿಕರು ಮಾಹಿತಿ ಪ್ರಕಾರ ಆಮ್ಲಜನಕದ ಕೊರತೆಗೆ ಆಸ್ಪತ್ರೆಯ ಅಧಿಕಾರಿಗಳನ್ನು ದೂಷಿಸಿದ್ದಾರೆ.
ಆರೋಪಗಳಿಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ಅಧಿಕಾರಿಗಳು ಆಮ್ಲಜನಕದ ಕೊರತೆಯಿಂದ ಯಾವುದೇ ರೋಗಿಗಳು ಸಾವನ್ನಪ್ಪಿಲ್ಲ, ಅವರಿಗೆ ಬಂದಂತಹ ಕಾಯಿಲೆಯಿಂದಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಹೇಳಿದ್ದಾರೆ.
ಮಾಹಿತಿಯ ಪ್ರಕಾರ, ಎಂಟು ರೋಗಿಗಳಲ್ಲಿ ಆರು ಮಂದಿಯನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಎಂಐಸಿಯು) ಘಟಕದಲ್ಲಿರಿಸಲಾಗಿತ್ತು.
ಈ ಸಂದರ್ಭ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು ಮಧ್ಯ ಪ್ರವೇಶಿಸಿ ಕೂಲಂಕುಷ ತನಿಖೆ ನಡೆಸುವಂತೆ ಸೂಚಿಸಿದರು. ತನಿಖೆಯ ಭಾಗವಾಗಿ ವಿವರವಾದ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಸಾವುಗಳು ಮತ್ತು ಆಮ್ಲಜನಕದ ಕೊರತೆಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ, ಬದಲಾಗಿ ರೋಗಿಗಳ ಸಾವಿಗೆ ಇತರ ವೈದ್ಯಕೀಯ ಕಾರಣಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.