ನಾಲ್ಕು ತಿಂಗಳ ಮಗುವಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಲಕ್ನೋ: ನಾಲ್ಕು ತಿಂಗಳ ಹಸುಗೂಸನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಮಗುವಿನ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಆರೋಪಿ ಪ್ರಸಾದ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ ಮಗುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.