ಯಡೋಗಾ ಸೇತುವೆ ಜಲಾವೃತ

ಹಳಿಯಾಳ : ತಾಲೂಕಿನ ಯಡೋಗಾ ಗ್ರಾಮದ ಸೇತುವೆ ಜಲಾವೃತಗೊಂಡಿದ್ದು, ಪರಿಣಾಮವಾಗಿ ಯಡೋಗಾ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ಇಂದು ಭಾನುವಾರ ಬೆಳಿಗ್ಗೆಯಿಂದಲೇ ಸೇತುವೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಹಳಿಯಾಳ ತಾಲೂಕಾಡಳಿತ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಇಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ.