ಭಾರಿ ಮಳೆ : ಬುಧವಾರ ಹೊನ್ನಾವರ ತಾಲೂಕಿನಲ್ಲಿ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ

ಹೊನ್ನಾವರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗ್ತಿದ್ದು, ನದಿ ತೀರದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸಿದ್ದಾರೆ…

ಹೊನ್ನಾವರ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಹಾಗೂ ಕೆಲವು ಪ್ರದೇಶಗಳಲ್ಲಿ ನೀರು ತುಂಬಿರುವುದರಿಂದ ಮಾನ್ಯ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ  ತಹಶೀಲ್ದಾರ್ ಹಾಗೂ ಕ್ಷೇತ್ರ  ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -26-07-2023 ರಂದು ಸಹ  ತಾಲೂಕಿನ  ಎಲ್ಲ ಅಂಗನವಾಡಿ ಹಾಗೂ 1-12 ನೆ ತರಗತಿಗಳಿಗೆ ರಜೆ ಮುಂದುವರಿಸಲಾಗಿದೆ..

ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ, ಭಾಸ್ಕೇರಿ ಹೊಳೆ ಉಕ್ಕಿ ಹರಿಯುತ್ತಿರುವ ಪರಿಣಾಮ, ಗ್ರಾಮಗಳಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ರಾತ್ರಿ ಮತ್ತೆ ನದಿ ಹರಿವು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ…