ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ಸೆಕ್ಟರ್ 50 ಪ್ರದೇಶದಲ್ಲಿ ನಡೆದಿದೆ.
ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್‌ಗೆ ಬರುವಂತೆ ಹೇಳಿದ್ದ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಗಿ ತಿಳಿಸಿದ್ದಾಳೆ.
ತನ್ನ ಪ್ರಜ್ಞಾಹೀನ ಸ್ಥಿತಿಯ ಲಾಭ ಪಡೆದು ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ತನಗೆ ಪ್ರಜ್ಞೆ ಬಂದ ಬಳಿಕ ನಡೆದ ಘಟನೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ ಆರೋಪಿಗಳು ತನ್ನ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾಳೆ.
ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಬಗ್ಗೆ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.