ತನ್ವಿರ್ ಸೇಠ್ ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ: ಪರಮೇಶ್ವರ್

ಬೆಂಗಳೂರು: ಡಿಜೆಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ ದಾಳಿಯಲ್ಲಿ ಪ್ರಕರಣ ದಾಖಲಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ತನ್ವೀರ್ ಸೇಠ್ ನನಗೆ ಪತ್ರ ಬರೆದಿರಬಹುದು. ನನಗೆ ಈ ವಿಚಾರ ಗೊತ್ತಿಲ್ಲ ಎಂದು

ತಿಳಿಸಿದ್ದಾರೆ.

ಇದು ಆದೇಶ ಅಲ್ಲ, ಕೇವಲ ಟಿಪ್ಪಣಿ. ಸಾಮಾನ್ಯವಾಗಿ ಬಂದಿದ್ದ ಪತ್ರವನ್ನು ಹಾಗೇ ಕಳುಹಿಸಿರುವ ಸಾಧ್ಯತೆ ಇರುತ್ತದೆ. ಸಬ್ ಕಮಿಟಿಯ ಮುಖ್ಯಸ್ಥ ನಾನೇ ಆಗಿದ್ದೇನೆ. ಹೀಗಾಗಿ ಪ್ರಕರಣಗಳನ್ನು ಪರಿಶೀಲಿಸುವಂತೆ ಸೂಚಿಸಲು ಪತ್ರ ಬರೆದಿರಬಹುದು. ಇದಕ್ಕೆಲ್ಲ ಅದರದ್ದೇ ಆದ ನಿಯಮಗಳಿವೆ. ಯಾವುದೇ ಕೇಸ್ ವಾಪಾಸ್ ಪಡೆಯುವಾಗ ಸಂಪುಟದಲ್ಲಿ ಚರ್ಚೆಯಾಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದರು. ಪೊಲೀಸ್ ಇಲಾಖೆಗೆ ಗೃಹ ಸಚಿವರು ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಟ್ವಿಟ್ಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದರು.