ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ಯುವತಿ ನಾಪತ್ತೆ

ದಾಂಡೇಲಿ : ಸ್ಥಳೀಯ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ಯುವತಿಯೊರ್ವಳು ನಾಪತ್ತೆಯಾಗಿರುವ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಂಧಿನಗರದ ಆಶ್ರಯ ಕಾಲೋನಿ ನಿವಾಸಿ, 20 ವರ್ಷ ವಯಸ್ಸಿನ ರೆಹನಾ ಅಜ್ಮದ್ ಫಿರಾ ಪಿರ್ಜಾದೆ ಈಕೆ ನಾಪತ್ತೆಯಾದ ಯುವತಿಯಾಗಿದ್ದಾಳೆ. ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಗರ ಠಾಣೆಯ ಪೊಲೀಸರು ದೂರು ಸ್ವೀಕರಿಸಿಕೊಂಡು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ