ದಾಂಡೇಲಿ: ಕಚೇರಿಯಲ್ಲೇ ನೇಣು ಬಿಗಿದುಕೊಂಡು ಅಬಕಾರಿ ಉಪನಿರೀಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.
ಅಬಕಾರಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣಪತಿ. ವಿ ವೈದ್ಯ (56) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಮೇಲಾಧಿಕಾರಿಯ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ದಾಂಡೇಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.