ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಪೂರ್ವ್ ಟಂಡನ್ ಟಾಪರ್ ಆಗಿದ್ದಾರೆ. 2022 ಸಾಲಿನ ಸಿಇಟಿ ಪರೀಕ್ಷೆಯಲ್ಲಿ 1,71,656 ಅಭ್ಯರ್ಥಿಗಳು ಎಂಜಿನಿಯರಿಂಗ್ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.