ರಷ್ಯಾ: ಮಾಸ್ಕೋದ 15 ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ರಾತ್ರಿಯಿಡಿ ಫೈರ್ ಅಲಾರಾಂ ಕಾರ್ಯನಿರ್ವಹಿಸದಿರುವುದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದವರು ಬೆಂಕಿ ನಂದಿಸಿ ಕಟ್ಟಡದಲ್ಲಿದ್ದ 200 ಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ.