ಚಿಕ್ಕೋಡಿಯಲ್ಲಿ ಮೊಬೈಲ್​ಗೆ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

ಚಿಕ್ಕೋಡಿ, ಜುಲೈ 27: ಮೊಬೈಲ್​ಗೆ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿ ಗ್ರಾಮದಲ್ಲಿ ನಡೆದಿದೆ. ಆಕಾಶ ಶಿವಸಾದ ಸಂಕಪಾಳ(27) ಮೃತ ದುರ್ದೈವಿ. ಇಂದು ಮುಂಜಾನೆ ಮನೆಯಲ್ಲಿ ಮೊಬೈಲ್ ಚಾರ್ಜಿಂಗ್ ಹಾಕಲು ಹೋದಾಗ ಅವಘಡ ಸಂಭವಿಸಿದೆ. ನಿಪ್ಪಾಣಿ ಬಸವೇಶ್ವರ ಚೌಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವೇಶ್ವರ‌ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.