ದಾಂಡೇಲಿ: 2022-23ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತು ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ದಾಂಡೇಲಿ ತಾಲೂಕು ಘಟಕಗಳ ಸಹಯೋಗದಲ್ಲಿ ಹಳೆ ನಗರ ಸಭೆಯ ಕಟ್ಟಡದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಾಳೆ ಸಂಜೆ 4 ಗಂಟೆಗೆ ನಡೆಯಲಿದೆ.
ಕಸಾಪ ಉ.ಕ.ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಡಾ.ಆರ್.ಜಿ.ಹೆಗಡೆ, ಹಳಿಯಾಳ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಾಕೀರ ಜಂಗೂಬಾಯಿ, ಹಳಿಯಾಳ-ದಾಂಡೆಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯಕ, ದಾಂಡೇಲಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ನಾಯಕ ಉಪಸ್ಥಿತರಿರುವರು. ಗೌರವ ಆಮಂತ್ರಿತರಾಗಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುರ್ತುಜಾಹುಸೇನ ಆನೆಹೊಸೂರು, ವೆಸ್ಟ್ಕೊಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ದಾಂಡೇಲಿ ಪ್ರವಾಸೋದ್ಯಮಿ ಅನಿಲ್ ಪಾಟ್ನೇಕರ ಉಪಸ್ಥಿತರಿರುವರು ಎಂದು ಕಸಾಪ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷ ನಾರಾಯಣ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.