ಯಲ್ಲಾಪುರ: ದೇಶದ ಏಕತೆ ಮತ್ತು ಸಮಗ್ರತೆಗೆ ಮಾರಕವಾಗಿರುವ ಮತಾಂಧ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸಂಘಪರಿವಾರದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ್ ಕಛೇರಿಗೆ ತೆರಳಿ, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಇದರ ಹಿಂದಿನ ದೇಶದ್ರೋಹಿಗಳ ಜಾಲವನ್ನು ಭೇದಿಸಬೇಕು. 2047 ರ ಒಳಗೆ ಭಾರತವನ್ನು ಇಸ್ಲಾಂ ರಾಷ್ಟ್ರವನ್ನಾಗಿಸುವ ಹುನ್ನಾರ ನಡೆದಿದ್ದು, ಅಂತಹ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಎಸ್.ಎಫ್.ಐ, ಪಿ.ಎಫ್.ಐ, ಎಸ್.ಡಿ.ಪಿ.ಐ ಮುಂತಾದ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘ ಪರಿವಾರದ ಕಾರ್ಯಕರ್ತರಾದ ರಾಮು ನಾಯ್ಕ, ಬಾಬು ಬಾಂದೇಕರ್, ವಿನೋದ ತಳೆಕರ್, ಗಜಾನನ ನಾಯ್ಕ ತಳ್ಳಿಕೇರಿ, ಎಲ್.ಆರ್.ಭಟ್ಟ ಇತರರಿದ್ದರು.