ದಾಂಡೇಲಿ : ಮಣಿಪುರದಲ್ಲಿ ಇತ್ತೀಚೆಗೆ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಅತ್ಯಂತ ಆಘಾತಕಾರಿ ಹಾಗೂ ಭಯಾನಕ ಘಟನೆಯನ್ನು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಅವರು ಇಂದು ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಇಡೀ ನಾಗರಿಕ ಸಮಾಜವೆ ತಲೆತಗ್ಗಿಸುವಂತಹ ಘಟನೆ ಇದಾಗಿದ್ದು, ಇಂಥಹ ಘನಘೋರ ಕೃತ್ಯವೆಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.