ಹಳಿಯಾಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇದ ಮತ್ತು ತ್ಯಾಜ್ಯ ನಿರ್ವಹಣೆಯ ಬಗ್ಗೆ ಜಾಗೃತಿ ಜಾಥಾ

ಹಳಿಯಾಳ : ಪಟ್ಟಣದ ಪುರಸಭೆಯ ಆಶ್ರಯದಡಿ ಏಕಬಳಕೆ ಪ್ಲಾಸ್ಟಿಕ್ ನಿಷೇದ ಮತ್ತು ತ್ಯಾಜ್ಯ ನಿರ್ವಹಣೆಯ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯ್ತು.

ಪಟ್ಟಣದ ಪುರಸಭೆಯ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾಕ್ಕೆ ಪುರಸಭೆಯ ಮುಖ್ಯಾಧಿಕಾರಿ ಅಶೋಕ ಸಾಳೆನ್ನವರ ಚಾಲನೆಯನ್ನು ನೀಡಿ ಮಾತನಾಡುತ್ತಾ, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತಂತೆ ಮತ್ತು ತ್ಯಾಜ್ಯ ನಿರ್ವಹಣೆಯ ಬಗ್ಗೆ ನಿರಂತರ ಜಾಗೃತಿ ಮೂಡಿಸುವ ಕಾರ್ಯವನ್ನು ಪುರಸಭೆಯ ಮೂಲಕ ಮಾಡಲಾಗುತ್ತಿದೆ. ಪುರಸಭೆಯ ವ್ಯಾಪ್ತಿಯ ನಾಗರಿಕರು ಪುರಸಭೆಯ ಈ ಕಾರ್ಯಕ್ಕೆ ಕೈ ಜೋಡಿಸಿ, ಸ್ವಚ್ಚ, ಸುಂದರ ಪಟ್ಟಣವನ್ನಾಗಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪರಿಸರ ಅಭಿಯಂತರರಾದ ದಶರ್ಿತಾ, ಪುರಸಭೆಯ ಅಧಿಕಾರಿ ಅನಿಲ್ ಚಲವಾದಿ ಸೇರಿದಂತೆ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ಜಾಗೃತಿ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಪುರಭವನದ ಮುಂಭಾಗದಲ್ಲಿ ಸಂಪನ್ನಗೊಂಡಿತು.